ಶಿವಮೊಗ್ಗ : ನಕಲಿ ದಾಖಲೆ ಸೃಷ್ಟಿ ಮಾಡಿ, ಬರೋಬ್ಬರಿ 17 ಲಕ್ಷ ರೂಪಾಯಿ ಮೋಸ ಮಾಡಿರುವ ಪ್ರಕರಣ ಶಿವಮೊಗ್ಗ ನಗರದಲ್ಲಿ ಬೆಳಕಿಗೆ ಬಂದಿದೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಈ ಕುರಿತಂತೆ ಪ್ರಕರಣ ದಾಖಲಾಗಿದೆ.
ಶಿವಮೊಗ್ಗದ ಇಂಡಸ್ ಬ್ಯಾಂಕ್ ಮ್ಯಾನೇಜರ್ ನವೀನ್ ಕುಮಾರ್ ಎಂಬುವರು ಈ ದೂರು ನೀಡಿದ್ದಾರೆ. ದಿನಾಂಕ ಜನವರಿ ೩೧ರಂದು ನಕಲಿ ದಾಖಲೆ ಸೃಷ್ಟಿ ಮಾಡಿ, ಬ್ಯಾಂಕ್‌ನಲ್ಲಿ ಗೃಹ ಸಾಲ ಪಡೆಯಲಿದೆ. ಅರುಣ್ ಕುಮಾರ್, ಚೇತನ್ ರಾಥೋಡ್, ಅಶೋಕ್ ಎಸ್. ಬಿದರೆಕಪ್ಪ ಎಂಬುವರ ವಿರುದ್ಧ ಠಾಣೆ ದೂರು ನೀಡಲಾಗಿದೆ. ಶಿವಮೊಗ್ಗದ ಸಬ್ ರಿಜಿಸ್ಟಾರ್ ಆಫೀಸ್‌ನಲ್ಲಿಯೇ ನಕಲಿ ದಾಖಲಾತಿ ಸೃಷ್ಟಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಪ್ರಕರಣ ಸದ್ಯ ಇಡೀ ಶಿವಮೊಗ್ಗ ಜಿಲ್ಲೆಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ.