ಶಿವಮೊಗ್ಗ : ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ೪೦% ಕಮಿಷನ್ ತನಿಖೆಗೆ ಆದೇಶಿಸಿರುವುದಕ್ಕೆ ಪ್ರಧಾನಮಂತ್ರಿ ಕಾರ್ಯಾಲಯಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಿಜಕ್ಕೂ ಇದು ಒಳ್ಳೆಯ ಕೆಲಸ. ತನಿಖೆಯಿಂದ ಸತ್ಯ ಸತ್ಯತೆ ಹೊರಬರಲಿ. ಯಾರು ತಪ್ಪಿತಸ್ಥರಿದ್ದಾರೆ ಅವರಿಗೆ ಶಿಕ್ಷೆ ಆಗಲಿ. ಯಾರೋ ಓರ್ವ ಆರೋಪ ಮಾಡಿದ ಕಾರಣಕ್ಕೆ ತನಿಖೆ ನಡೆಸಿ ಎಂದಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗಲೂ ತನಿಖೆ ನಡೆಸಿ ಎಂದಿದ್ದಾರಲ್ಲ ಅದಕ್ಕೆ ನೀವು ಕೂಡ ಅಭಿನಂದಿಸಬೇಕು ಎಂದಿದ್ದಾರೆ.
ಜಿಲ್ಲಾ ಉಸ್ತವಾರಿ ಸಚಿವ ಕೆ.ಸಿ.ನಾರಾಯಣಗೌಡ ಕೂಡ ಪ್ರಧಾನಮಂತ್ರಿ ಸಚಿವಾಲಯಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.