15 ದಿನದಲ್ಲಿ ಜಿಲ್ಲೆಯಾದ್ಯಂತ 402ವಿದ್ಯಾರ್ಥಿಗಳಿಗೆ ಸೋಂಕು 

ಶಿವಮೊಗ್ಗ : ಜಿಲ್ಲೆಯಲ್ಲಿ ಕಳೆದ 15 ದಿನಗಳಲ್ಲಿ 407 ವಿದ್ಯಾರ್ಥಿಗಳಲ್ಲಿ ಕರೋನ ಸೋಂಕು ದೃಢಪಟ್ಟಿದೆ. ಹಾಗೆಯೇ ಮಕ್ಕಳಿಗೆ ಶೀತ, ಕೆಮ್ಮು, ಜ್ವರದ ಸಮಸ್ಯೆ ತೀವ್ರವಾಗಿ ಕಾಡುತ್ತಿದೆ.

ಈ ಹಿನ್ನೆಲೆಯಲ್ಲಿ ಈಗಾಗಲೇ ಹಲವು ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ಜಿಲ್ಲೆಯಲ್ಲಿ ಜನವರಿ 1ರಿಂದ 15 ನೇ ತಾರೀಕಿನವರೆಗೆ ಒಟ್ಟು 1848 ಜನರಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಅದರಲ್ಲಿ ಶೇಕಡಾ 38.09 ರಷ್ಟು ಪ್ರಕರಣಗಳು ವಿದ್ಯಾರ್ಥಿಗಳಲ್ಲಿ ಕಾಣಿಸಿಕೊಂಡಿದೆ. ಈಗಾಗಲೇ ಐದಕ್ಕೂ ಅಧಿಕ ಪ್ರಕರಣಗಳು ಕಂಡುಬರುವ ಶಿಕ್ಷಣ ಸಂಸ್ಥೆಗಳಿಗೆ ಏಳು ದಿನಗಳ ರಜೆ ಘೋಷಿಸಲಾಗಿತ್ತಿದೆ.