ಚಿಕ್ಕಮಗಳೂರು: ೬ರಿಂದ ೧೨ನೇ ತರಗತಿ ಸಂಪೂರ್ಣ ಓಪನ್ ಮಾಡಲು ಈಗಾಗಲೇ ಮೌಖಿಕವಾಗಿ ಸೂಚನೆ ನೀಡಿದ್ದೇವೆ. ಬೆಳಗ್ಗೆಯಿಂದ ಸಂಜೆವರೆಗೂ ಶಾಲೆ ನಡೆಸಲು ಹೇಳಿದ್ದೇವೆ. ವಿದ್ಯಾರ್ಥಿಗಳಿಗೆ ಬಲವಂತ ಮಾಡುವಂತಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ರು.
ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಧ್ಯಾಹ್ನದ ಬಿಸಿಯೂಟ ಇಲ್ಲದೆ ಇರುವುದರಿಂದ ಬಲವಂತ ಇಲ್ಲ. ದಸರಾ ಆದ ಮೇಲೆ ಮುಂದಿನ ಕ್ರಮ ಕೈಗೊಳ್ಳುತ್ತೇವೆ. ರಾಜ್ಯದ ತುಂಬಾ ಕಡೆ ಕೋವಿಡ್ ಪಾಸಿಟಿವ್ ರೇಟ್ ಕಡಿಮೆ ಇದೆ. ಹಾಗಾಗಿ ಶಾಲೆಗಳಿಗೆ ತೊಂದರೆಯಾಗುತ್ತದೆ ಎಂದು ಅನಿಸುವುದಿಲ್ಲ ಎಂದರು.