ಶಿವಮೊಗ್ಗ : ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕು. ಹಾಗೂ ಅವರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಬೇಕೆಂದು ಮಾಚಿ ಸಚಿವ ಕಿಮ್ಮನೆ ರತ್ನಾಕರ ಆಗ್ರಹಿಸಿದ್ದಾರೆ.
ಮಾಧ್ಯಮ ಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ನಡೆದ ಚಂದ್ರಶೇಖರ್ ಎಂಬ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಬಾಲಿಶಃ ಹೇಳಿಕೆ ನೀಡಿದ್ದಾರೆ. ಈ ಮೂಲಕ ತೀರ್ಥಹಳ್ಳಿ ಮತದಾರರ ಮರ್ಯಾದೆ ಕಳೆದಿದ್ದಾರೆ. ಆಡಳಿತ ಪಕ್ಷದವರೇ ಕೋಮು ಭಾವನೆ ಸೃಷ್ಟಿಸುವ ಹೇಳಿಕೆ ನೀಡುತ್ತಿದ್ದಾರೆ. ತೀರ್ಥಹಳ್ಳಿಯ ಜನರು ಹೇಗೆ ಬದುಕುತ್ತಿದ್ದಾರೆ ಎಂದು ರಾಜ್ಯದ ಜನತೆಗೆ ಈಗ ಅರ್ಥವಾಗಿರಬೇಕು. ಶುಕ್ರವಾರ ಗೃಹಸಚಿವರ ವಿರುದ್ಧ ತೀರ್ಥಹಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಗುವುದು. ಸಾಧ್ಯವಾದರೆ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು.
ಇನ್ನೂ ತುಂಗಾ ನಗರ ಪೋಲೀಸ್ ಠಾಣೆಯ ಬಿಜೆಪಿಗರ ಠಾಣೆ ಆಗಿದೆ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹೋದರೆ ಕೇಸ್ ದಾಖಲಿಸುವುದಿಲ್ಲ. ಬದಲಿಗೆ ಅವರ ಮೇಲೆ ಪ್ರಕರಣ ದಾಖಲಿಸುತ್ತಿದ್ದಾರೆ. ಶೀಘ್ರದಲ್ಲಿ ಇದರ ವಿರುದ್ಧ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.