ಶಿವಮೊಗ್ಗ : ಜಿಲ್ಲಾ ಬ್ರಾಹ್ಮಣ ಸಂಘಟನೆಗಳ ಒಕ್ಕೂಟದಿಂದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಅಶೋಕ್ ಹಾರನಹಳ್ಳಿ ಅವರಿಗೆ ಸನ್ಮಾನ ಸಮಾರಂಭ ಹಮ್ಮಿಕೊಂಡಿದ್ದಾರೆ. ಇತ್ತೇಚೆಗೆ ನಡೆದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಚುನಾವಣೆಯಲ್ಲಿ ಅಶೋಕ್ ಹಾರನಹಳ್ಳಿ ಗೆದ್ದು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಈ ಹಿನ್ನೆಲೆ ಶನಿವಾರ ಗಾಯಿತ್ರಿ ಮಾಂಗಲ್ಯ ಮಂದಿರದಲ್ಲಿ ಸನ್ಮಾನ ಸಮಾರಂಭ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ನಟರಾಜ್ ಭಾಗವತ್ ವಹಿಸಿಕೊಳ್ಳಲಿದ್ದಾರೆ. ಶೃಂಗೇರಿ ಶಂಕರ ಮಠದ ಧರ್ಮಾಧಿಕಾರಿ ಡಾ.ಪಿ.ನಾರಾಯಣ್ ಅಭಿನಂದನಾ ನುಡಿಗಳನ್ನಾಡಲಿದ್ದಾರೆ. ಇನ್ನು ಇದೇ ವೇಳೆ ಜಿಲ್ಲೆಯ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಗುವುದು ಎಂದು ಶಿವಮೊಗ್ಗ ಜಿಲ್ಲಾ ಬ್ರಾಹ್ಮಣ ಸಂಘಟನೆಗಳ ಒಕ್ಕೂಟದಿಂದ ಮಾಹಿತಿ ನೀಡಿದರು.