ಭದ್ರಾವತಿಯಲ್ಲಿ ಬಿಜೆಪಿ ಪರ ಅಲೆ ಎದ್ದಿದೆ

ಹೈಲೆಟ್ಸ್ : 

ಜನಸ್ಪಂದನಾ ಕಾರ್ಯಕ್ರಮ ಕೈ ನಾಯಕರಿಗೆ ಆಘಾತ ನೀಡಿದೆ
ಭದ್ರಾವತಿ ವಿಧಾನಸಭಾ ಕ್ಷೇತ್ರವನ್ನು ಸವಾಲಾಗಿ ಸ್ವೀಕರಿಸಿದ್ದೇನೆ
ಅಲ್ಲಿನ ಮತದಾರರು ಬದಲಾವಣೆ ಬಯಸಿದ್ದಾರೆ
ಭದ್ರಾವತಿಯಲ್ಲಿ ಬಿಜೆಪಿ ಪರ ಅಲೆ ಎದ್ದಿದೆ
ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿಕೆ

ಶಿವಮೊಗ್ಗ : ಸದ್ಯ ಬಿಜೆಪಿಯ ಭದ್ರ ಕೋಟೆಯಂತಿರುವ ಶಿವಮೊಗ್ಗ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳು ಬಿಜೆಪಿ ಭದ್ರ ಕೈಗಳಲ್ಲಿವೆ. ಆದ್ರೆ ಭದ್ರಾವತಿ ಮಾತ್ರ ಬಿಜೆಪಿ ಹಿಡಿತಕ್ಕೆ ಇನ್ನೂ ಕೂಡ ಸಿಕ್ಕಿಲ್ಲ. ಆದರೆ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಭದ್ರಾವತಿ ಮೇಲೆ ಕಣ್ಣಿಟ್ಟಿದೆ.

ಈ ನಡುವೆ, ಭದ್ರಾವತಿ ವಿಧಾನಸಭಾ ಕ್ಷೇತ್ರವನ್ನು ನಾನು ಸವಾಲಾಗಿ ಸ್ವೀಕರಿಸಿದ್ದೇನೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಶಿವಮೊಗ್ಗದಲ್ಲಿ ಹೇಳಿಕೆ ನೀಡಿದರು.  ಈ ಹೇಳಿಕೆ ರಾಜಕೀಯ ವಲಯದಲ್ಲಿ ಮತ್ತಷ್ಟು ಸಂಚಲಕ್ಕೆ ಕಾರಣವಾಗಿದೆ. ಹಾಗೇನೆ ಭದ್ರಾವತಿಯನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಬಿಜೆಪಿ ರಣತಂತ್ರ ಹೇಗಿರಬಹುದು ಎಂಬ ಕುತೂಹಲ ಹೆಚ್ಚಾಗಿದೆ.

ಇನ್ನು ಕಾಂಗ್ರೆಸ್ ವಿರುದ್ಧ ಶಿವಮೊಗ್ಗದಲ್ಲಿ ವಾಗ್ದಾಳಿ ನಡೆಸಿದ ವಿಜಯೇಂದ್ರ, ಸಿದ್ದರಾಮೋತ್ಸವ ಕಾರ್ಯಕ್ರಮ ಮಾಡಿ ನಾವು ಅಧಿಕಾರಿಕ್ಕೆ ಬಂದೇ ಬಿಡುತ್ತೇವೆ ಎಂದು ಕಾಂಗ್ರೆಸ್ ಮುಖಂಡರು ಅಂದುಕೊಂಡಿದ್ದರು. ಆದ್ರೆ ಬಿಜೆಪಿಯ ಜನಸ್ಪಂದನೆ ಕಾರ್ಯಕ್ರಮ ನೋಡಿ ಅವರಿಗೆ ಆಘಾತವಾಗಿದೆ ಎಂದರು.