ಶೈಕ್ಷಣಿಕ ಸಮಸ್ಯೆಗಳನ್ನ ಬಗೆಹರಿಸುವಂತೆ ಎಬಿವಿಪಿ ಆಗ್ರಹ

ಶಿವಮೊಗ್ಗ : ವಿವಿಧ ಶೈಕ್ಷಣಿಕ ಸಮಸ್ಯೆಗಳನ್ನ ಬಗೆಹರಿಸುವಂತೆ ಶಿವಮೊಗ್ಗ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವತಿಯಿಂದ ಜಿಲ್ಲಾಧಿಕಾರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಗಿದೆ.

ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನ ಆದಷ್ಟು ಶೀಘ್ರವಾಗಿ ಪೂರ್ಣ ಪ್ರಮಾಣದಲ್ಲಿ ಈಡೇರಿಸಬೇಕು. ಈ ಮೂಲಕ ಕಾಲೇಜಿನಲ್ಲಿ ತರಗತಿಗಳು ಸರಾಗವಾಗಿ ನಡೆಯುವಂತೆ ಮಾಡಬೇಕು. ಇಂಜಿನಿಯರಿಂಗ್ ವಿದ್ಯಾರ್ಥಿಗಳ ಪ್ರವೇಶ ಶುಲ್ಕದ ಏರಿಕೆ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.