ಮುಂಬರುವ ಚುನಾವಣೆಗಳಲ್ಲಿ ಎಐಎಂಐಎಂ ಸ್ಪರ್ಧೆ ಅಭ್ಯರ್ಥಿಗಳು ಕಣಕ್ಕೆ 

ಶಿವಮೊಗ್ಗ : ಶಿವಮೊಗ್ಗದಲ್ಲಿ ಎಐಎಂಐಎಂ ಪಕ್ಷದ ನೂತದ ಕಮಿಟಿ ರಚನೆಯಾಗಿದ್ದು ಮುಂಬರುವ ದಿನಗಳಲ್ಲಿ ಚುನಾವಣೆಗಳಲ್ಲಿ ಸ್ಪರ್ಧಿಸಲಿದ್ದೇವೆ ಎಂದು ಎಐಎಂಐಎಂ ಜಿಲ್ಲಾಧ್ಯಕ್ಷ ಅಬ್ದುಲ್ ನವೀದ್ ಹೇಳಿದ್ದಾರೆ.

ಈ ಕುರಿತಾಗಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಲ್ಲೆಯಾದ್ಯಂತ ಪಕ್ಷದ ಮೆಂಬರ್‌ಷಿಪ್ ಮಾಡಿಕೊಳ್ಳಲಾಗ್ತಾಯಿದೆ. ಚುನಾವಣೆಗಳಲ್ಲಿ  ನಮ್ಮ ಪಕ್ಷದ ಅಭ್ಯರ್ಥಿಗಳನ್ನ ನಿಲ್ಲಿಸುವ ಕುರಿತಾಗಿ ಚರ್ಚೆ ನಡೆದಿದ್ದು ಗ್ರಾಮ ಪಂಚಾಯಿತಿಯಿಂದ ಜಿಲ್ಲಾ ಪಂಚಾಯಿತಿವರೆಗೆ ಎಲ್ಲಾ ಚುನಾವಣೆಗಳಲ್ಲಿ ಸ್ಪರ್ಧೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.