ಶಿವಮೊಗ್ಗ : ದೊಡ್ಡಪೇಟೆ ಪೊಲೀಸ್ ಠಾಣೆಯ ಎಎಸ್‌ಐ ಸುರೇಶ್ ಎಂಬುವವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ೪೯ ವರ್ಷದ ಸುರೇಶ್‌ಗೆ ಎದೆ ನೋವು ಕಾಣಿಸಿಕೊಂಡಿದೆ.
ನಂತರ ಅವರನ್ನ ಮೆಗ್ಗಾನ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಚಿಕತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯವರು ದೃಢ ಪಡಿಸಿದ್ದಾರೆ. ಸುರೇಶ್, ಹಲವಾರು ವರ್ಷಗಳಿಂದ ದೊಡ್ಡಪೇಟೆ ಠಾಣೆಯಲ್ಲಿ ಸೇವೆ ಸಲ್ಲಿಸ್ತಾ ಇದ್ದರು. ಇವರ ಸಾವಿಗೆ ದೊಡ್ಡಪೇಟೆ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಂತಾಪ ವ್ಯಕ್ತಪಡಿಸಿದ್ದಾರೆ.