ಶಿವಮೊಗ್ಗ : ರಾಷ್ಟ್ರಧ್ವಜ ಹೇಳಿಕೆಗೆ ಸಂಬಂಧಿಸದಂತೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ವಾಗ್ದಾಳಿಗಳು, ಆರೋಪಗಳು ಇನ್ನು ಮುಗಿದಿಲ್ಲ. ಆಮ್ ಆದ್ಮಿ ಪಾರ್ಟಿ ಇದೇ ವಿಷಯವನ್ನು ಮುಂದಿಟ್ಟುಕೊಂಡು ಈಶ್ವರಪ್ಪ ವಿರುದ್ಧ ಶಿವಮೊಗ್ಗದಲ್ಲಿ ಹೋರಾಟಕ್ಕೆ ಮುಂದಾಗಿದೆ.
ಈ ಹಿನ್ನೆಲೆ ಆಮ್ ಆದ್ಮಿ ರಾಜ್ಯ ನಾಯಕರು ಕೂಡ ಶಿವಮೊಗ್ಗಕ್ಕೆ ಬಂದು ಈಶ್ವರಪ್ಪ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಈಶ್ವರಪ್ಪ ರಾಷ್ಟ್ರಧ್ವಜಕ್ಕೆ ಅವಮಾನ ಮಾಡುವ ಹೇಳಿಕೆ ನೀಡುವ ಮೂಲಕ ರಾಷ್ಟ್ರದ್ರೋಹದ ಅಪರಾಧ ಮಾಡಿದ್ದಾರೆ. ಹೀಗಾಗಿ ಕೂಡಲೇ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿ ದೂರು ನೀಡಿದ್ದಾರೆ.