ಸಾಗರ ರಸ್ತೆಯಲ್ಲಿ ಅಪಘಾತ-ಓರ್ವ ವಿದ್ಯಾರ್ಥಿನಿ ಸಾವು

ಹೈಲೆಟ್ಸ್: 

ವಿದ್ಯಾರ್ಥಿನಿಯರಿಗೆ ಟಿಪ್ಪರ್ ಲಾರಿ ಡಿಕ್ಕಿ 

ಆಸ್ಪತ್ರೆಯಲ್ಲಿ ಓರ್ವ ವಿದ್ಯಾರ್ಥಿನಿ ಸಾವು 

ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ, ಆಸ್ಪತ್ರೆಗೆ ದಾಖಲು 

ಸಾಗರ:
ಮೂವರು ವಿದ್ಯಾರ್ಥಿನಿಯರಿಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ, ಓರ್ವ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ಸಾಗರದ ಸಣ್ಣಮನೆ ಸೇತುವೆಯ ಬಳಿ ಈ ಅಪಘಾತ ಸಂಭವಿಸಿದೆ. ಮೊದಲು ಸಾಗರದ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದ್ರೆ, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕರೆತರುವ ಮಾರ್ಗ ಮಧ್ಯೆ ೧೮ ವರ್ಷದ ಪ್ರತಿಮಾ ಎಂಬ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ಈ ಕುರಿತು ಸಾಗರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.