ಶಿವಮೊಗ್ಗ ವ್ಯಸನ ಮುಕ್ತ ಜಿಲ್ಲೆಯಾಗಿಸಲು ಕ್ರಮ

ಶಿವಮೊಗ್ಗ : ಅನಧಿಕೃತವಾಗಿ ಮದ್ಯ ಮಾರಾಟ ಮಾಡುವ ಅಂಗಡಿಗಳ ಪರವಾನಿಗೆ ರದ್ದುಪಡಿಸಿ ಕಾನೂನು ಕ್ರಮ ಜರುಗಿಸುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಮದ್ಯ ಮತ್ತು ಮಾದಕ ವಸ್ತುಗಳ ಬಳಕೆ ನಿಯಂತ್ರಣಕ್ಕಾಗಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಜತೆಯಲ್ಲಿ ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸುವ ಕುರಿತು  ಆಯೋಜಿಸಲಾಗಿದ್ದ ಸಭೆಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ಜಿಲ್ಲೆಯನ್ನು ವ್ಯಸನ ಮುಕ್ತ ಜಿಲ್ಲೆಯನ್ನಾಗಿಸುವ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳು ಸಂಘ ಸಂಸ್ಥೆಗಳ ಜತೆ ಕೈಜೋಡಿಸಿ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದರು.

ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಮಾತನಾಡಿ, ಮೆಗ್ಗಾನ್ ಜಿಲ್ಲಾ ಆಸ್ಪತ್ರೆಯಲ್ಲಿ ವ್ಯಸನಮುಕ್ತತೆಗಾಗಿ ವಿಶೇಷ ವಾರ್ಡ್ ಈ ತಿಂಗಳ ಒಳಗಾಗಿ ಆರಂಭಿಸಲು ಸೂಚನೆ ನೀಡಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮದ್ಯ ಸೇವನೆ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದರು.