ಫೆಬ್ರವರಿ 12ಕ್ಕೆ ವಿಮಾನ ನಿಲ್ದಾಣ ಉದ್ಘಾಟನೆ 

ಹೈಲೆಟ್ಸ್:

ಫೆಬ್ರವರಿ 12ಕ್ಕೆ ವಿಮಾನ ನಿಲ್ದಾಣ ಉದ್ಘಾಟನೆ 

ವಿಮಾನ ನಿಲ್ದಾಣ ಲೋಕಾರ್ಪಣೆಗೆ ಮುಹೂರ್ತ ಫಿಕ್ಸ್ 

ಶಿವಮೊಗ್ಗ ಆಗಮಿಸಲಿದ್ದಾರೆ ಪ್ರಧಾನಿ ಮೋದಿ 

ಶಿವಮೊಗ್ಗ:

ಶಿವಮೊಗ್ಗದ ವಿಮಾನ ನಿಲ್ದಾಣದ ಉದ್ಘಾಟನೆಗೆ ಕೊನೆಗೂ ಕಾಲ ಕೂಡಿ ಬಂದಿದೆ. ಫೆಬ್ರವರಿ 12ಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟನೆ ಮಾಡುವ ಸಾಧ್ಯತೆಗಳು ಇವೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಜನವರಿ ಮೊದಲ ವಾರದಲ್ಲಿಯೇ ವಿಮಾನ ನಿಲ್ದಾಣ ಲೋಕಾರ್ಪಣೆಯಾಗಬೇಕಿತ್ತು. ಆದ್ರೆ, ಕಾಮಗಾರಿಗಳು ಪ್ರಗತಿಯಲ್ಲಿ ಇರೋದ್ರಿಂದ ಉದ್ಘಾಟನೆ ಕಾರ್ಯಕ್ರಮ ಮುಂದಿನ ತಿಂಗಳು ನಡೆಯಲಿವೆ. 

ಬೃಹತ್ ಸಮಾವೇಶಕ್ಕೂ ಬಿಜೆಪಿ ತಯಾರಿ ಮಾಡಿಕೊಳ್ಳುತ್ತಿದೆ. ಈಗಾಗಲೇ ಶಿವಮೊಗ್ಗ ವಿಮಾನ ನಿಲ್ದಾಣದ ಬಹುತೇಕ ಕಾಮಗಾರಿಗಳು ಪೂರ್ಣಗೊಂಡಿವೆ. ರನ್‌ವೇ ಕೂಡ ರೆಡಿಯಾಗಿದೆ. ಫಿನಿಶ್ ಕೊಡುವ ಕಾರ್ಯ ನಡೀತಾ ಇದೆ. ಇನ್ನೇನು ಕೆಲ ದಿನಗಳಲ್ಲಿಯೇ ಉಕ್ಕಿನ ಹಕ್ಕಿಗಳ ಹಾರಾಟವನ್ನು ಶಿವಮೊಗ್ಗದ ಜನರು ನೋಡಬಹುದಾಗಿದೆ. ಅಲ್ಲದೆ ಶಿವಮಗ್ಗ ಜಿಲ್ಲೆಯ ಪ್ರವಾಸೋದ್ಯಮ ಮತ್ತು ಕೈಗಾರಿಕೆಗಳ ಬೆಳವಣಿಗೆಗೂ ವಿಮಾನಯಾನ ಅನುಕೂಲವಾಗಲಿದೆ. ಈ ತಿಂಗಳಾಂತ್ಯದಲ್ಲಿ ಎಲ್ಲ ಕಾರ್ಯಗಳೂ ಪೂರ್ಣಗೊಳ್ಳಲಿವೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು