ಅಖಿಲ ಭಾರತ ಭಗೀರಥ ಜಯಂತೋತ್ಸವ : ಉಪ್ಪಾರರ ಬೃಹತ್ ಸಮಾವೇಶ 

ಶಿವಮೊಗ್ಗ : ಶುಕ್ರವಾರ ಚಿತ್ರದುರ್ಗದ ಹೊಸದುರ್ಗ ತಾಲೂಕಿನ ಬೃಹ್ಮವಿದ್ಯಾನಗರ ಸುಕ್ಷೇತ್ರದಲ್ಲಿ ಅಖಿಲ ಭಾರತ ಭಗೀರತ ಜಯಂತೋತ್ಸವ ಹಾಗೂ ಉಪ್ಪಾರರ ಬೃಹತ್ ಸಮಾವೇಶ ನಡೆಯಲಿದೆ. ಡಾ. ಶ್ರೀಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳು ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಹಿಸಿಕೊಳ್ಳಲಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರ್ ಸ್ವಾಮಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸುಮಾರು 2 ಲಕ್ಷಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆಯಿದ್ದು ಶಿವಮೊಗ್ಗದಿಂದ 2ರಿಂದ 3 ಸಾವಿರ ಜರ ಹೋಗಲಿದ್ದೇವೆ ಎಂದು ಉಪ್ಪಾರ ಸಮಾಜದಿಂದ ಮಾಧ್ಯಮಗೋಷ್ಠಿ ನಡೆಸಿ ಮಾಹಿತಿ ನೀಡಿದರು.