ಶಿವಮೊಗ್ಗ: ಮಹಾನಗರ ಪಾಲಿಕೆಯ ವಾರ್ಡ್ ನಂಬರ್ ೧೬ರಲ್ಲಿ ೪೦ ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಿ ಪತ್ರಕರ್ತ ಗಿರೀಶ್ ಬಿ.ಸಿ. ಅವರು ಎಸಿಬಿಗೆ ದೂರು ನೀಡಿದ್ದಾರೆ ಎಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಹೇಳಿದ್ರ.
ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ರಮ ಖಾತೆ ಮಾಡಿ ಪಾಲಿಕೆಯ ಕಂದಾಯ ಧಿಕಾರಿಗಳು ಕೇವಲ ನೋಟರಿ ಪ್ರಮಾಣಪತ್ರಗಳನ್ನು ಪಡೆದಿದ್ದಾರೆ. ಯಾವುದೇ ನಿಯಮ-ನಿಬಂಧನೆಗಳನ್ನು ಪಾಲಿಸದೆ ೪೦ ನಿವೇಶನಗಳನ್ನು ಅಕ್ರಮವಾಗಿ ಖಾತೆ ಮಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಅಕ್ರಮ ಎಸಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಎಸಿಬಿಗೆ ದೂರು ನೀಡಲಾಗಿದೆ ಎಂದರು.