ಶಿವಮೊಗ್ಗ : ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಅಕ್ರಮ ಸಾಗಣೆ ವಿರೋಧಿ ದಿನಾಚಾರಣೆ ಆಚರಿಸಲಾಗಿದೆ. ಕಾಲೇಜಿನ ಎನ್‌ಎಸ್‌ಎಸ್, ರೆಡ್‌ಕ್ರಾಸ್ ಘಟಕ ಹಾಗೂ ವಿವಿಧ ಸಂಘ ಸಂಸ್ಥೆಗಳು ಮತ್ತು ಜಿಲ್ಲಾ ಕಾನೂನ ಸೇವಾ ಪ್ರಾಧಿಕಾರದ ಸಂಯುಕ್ತಾಶ್ರಯದಲ್ಲಿ ಈ ಕಾರ್ಯಕ್ರಮ ನಡೆಯಿತು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಜಣ್ಣ ಸಂಕಣ್ಣ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು ಯಾರೂ ಕೂಡ ಮಾದಕ ವ್ಯಸಿಗಳಾಗಬಾರದು ಅದರಲ್ಲೂ ಯುವ ಜನತೆ ಈ ವಿಚಾರವಾಗಿ ಬಹಳ ಎಚ್ಚರಿಕೆಯಿಂದ ಇರಬೇಕು ಎಂದರು. ಕಾರ್ಯಕ್ರಮದಲ್ಲಿ ಸುರಭಿ ಮಹಿಳಾ ಮಂಡಳಿಯ ನಿರ್ದೇಶಕಿ ರೇಖಾ, ಕಾಲೇಜಿನ ಪ್ರಾಂಶುಪಾಲೆ ಡಾ.ಸಂಧ್ಯಾಕಾವೇರಿ ಹಾಗೂ ಪ್ರಮುಖಕರು ಉಪಸ್ಥಿತರಿದ್ದರು.