ಶಿವಮೊಗ್ಗ : ಕೋಟೆಗಂಗೂರು ಗ್ರಾಮ ಪಂಚಾಯತ್ ವ್ಯಾಪ್ತಿಗೆ ಆರೋಗ್ಯ ಸಹಾಯಕಿಯನ್ನು ನೇಮಕ ಮಾಡಬೇಕು ಹಾಗೂ ಸಮರ್ಪಕ ಸರ್ಕಾರಿ ಬಸ್ ಸಂಪರ್ಕವನ್ನು ಕಲ್ಪಿಸಿಕೊಡಬೇಕೆಂದು ಆಗ್ರಹಿಸಿ ಕೋಟೆಗಂಗೂರು ಸ್ತ್ರೀ ಬಂಧು ಸ್ವ ಸಹಾಯ ಒಕ್ಕೂಟ ಹಾಗೂ ಗ್ರಾಮಸ್ಥರು ಜಿಲ್ಲಾಧಕಾರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಕೋಟೆ ಗಂಗೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ಆರೋಗ್ಯ ಸಹಾಯಕಿಯ ಅವಶ್ಯಕತೆಯಿದೆ. ಕಳೆದ ಎರಡು ವರ್ಷಗಳಿಂದ ಈ ಹುದ್ದೆ ಖಾಲಿಯಿದೆ. ಈ ಕುರಿತು ಕ್ರಮ ಕೈಗೊಳ್ಳುವಂತೆ ಗ್ರಾಮ ಪಂಚಾಯತ್‌ಗೆ ಮನವಿ ಸಲ್ಲಿಸಲಾಗಿತ್ತು. ಗ್ರಾಮ ಈ ವಿಚಾರವನ್ನು ಡಿಹೆಚ್‌ಒ ಗಮನಕ್ಕೂ ತಂದಿದ್ದಾರೆ. ಆದರೆ ಈ ವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ದರಿಂದ ಕೂಡಲೇ ಆರೋಗ್ಯ ಸಹಾಯಕಿಯನ್ನು ನೇಮಕ ಮಾಡಬೇಕು. ಹಾಗೂ ಈ ಭಾಗಕ್ಕೆ ಸರಿಯಾದ ಬಸ್ ವ್ಯವಸ್ಥೆಯಿಲ್ಲ. ಶಾಲಾ ಮಕ್ಕಳಿಗೆ ಅನುಕೂಲವಾಗುವಂತೆ ಬಸ್‌ಗಳ ಓಡಾಡುತ್ತಿವೆ. ಶಾಲೆಗಳಿಗೆ ರಜೆ ನೀಡಿದರೆ ಅವು ಕೂಡ ಓಡಾಡುವುದಿಲ್ಲ. ಆದ್ದರಿಂದ ಬಸ್ ವ್ಯವಸ್ಥೆಯನ್ನು ಕಲ್ಪಿಸಿಕೊಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.