ಶಿವಮೊಗ್ಗ : ಭದ್ರಾವತಿ ತಾಲೂಕು ಕಚೇರಿಯಲ್ಲಿನ ಅಧಿಕಾರಿಗಳು ಸರ್ವಾಧಿಕಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿ, ಡಿಎಸ್‌ಎಸ್ ಭದ್ರಾವತಿ ಶಾಖೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಹಾಗೆಯೇ ಇಂಥಹ ಅಧಿಕಾರಿಗಳ ವಿರುದ್ದ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.
ಈ ಕುರಿತು ಮಾತನಾಡಿದ ಡಿಎಸ್‌ಎಸ್‌ನ ರವಿಪ್ರಕಾಶ್, ಭದ್ರಾವರಿ ತಾಲೂಕು ಕಚೇರಿಯ ಕೆಲ ಅಧಿಕಾರಿಗಳು ಸರ್ವಾಧಿಕಾರಿಗಳಂತೆ ವರ್ತಿಸುತ್ತಿದ್ದಾರೆ. ಇದನ್ನ ಕೇಳಲು ಹೋದ ಒಬ್ಬ ಹೋರಾಟಗಾರ ಕೆಟ್ಟದಾಗಿ ನೋಡಿದರು ಎಂದು ಹೇಳಿ ಅವರನ್ನ ಜೈಲಿಗೆ ಕಳುಹಿಸಿದ್ದಾರೆ. ಆದರೆ ಅವರು ಜೈಲಿನಲ್ಲಿದರೂ ಕೂಡ ಅಲ್ಲಿಯೇ ಈ ಕುರಿತಾಗಿ ಹೋರಾಟ ಮಾಡುತ್ತಿದ್ದಾರೆ. ಇಂತಹ ಅಧಿಕಾರಿಗಳನ್ನ ಕೂಡಲೆ ಕೆಲಸದಿಂದ ವಜಾ ಮಾಡಿ, ಪ್ರಾಮಾಣಿಕ ಅಧಿಕಾರಿಗಳನ್ನ ನೇಮಿಸಬೇಕೆಂದು ಆಗ್ರಹಿಸಿದರು.