ಶಿವಮೊಗ್ಗ : ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಜಿಲ್ಲಾ ಕಾರ್ಯಕಾರಣಿ ಸಭೆ ನಡೆಯಿತು. ಸಭೆಯಲ್ಲಿ ಕೇಂದ್ರ ಸರ್ಕಾರದ ಆತ್ಮನಿರ್ಭರ ಬಜೆಟ್ ಕುರಿತಾಗಿ ಸಂವಾದ ಕಾರ್ಯಕ್ರಮ ನಡೆಯಿತು.
ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ ಸಭೆಯನ್ನ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಬಜೆಟ್ ವಿಚಾರವನ್ನ ಸಮಪರ್ಕವಾಗಿ ಜನರಿಗೆ ತಲುಪಿಸಬೇಕಿದೆ. ಬಜೆಟ್‌ನಿಂದಾಗಿ ಮುಂದಿನ ದಿನಗಳಲ್ಲಿ ದೇಶದ ಜಿಡಿಪಿ ಹೆಚ್ಚಾಗಲಿದೆ ಎಂದರು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ಶಾಸಕ ಅಶೋಕ್‌ನಾಯ್ಕ್, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಮಾಜಿ ಎಂಎಲ್‌ಸಿ ಎಂ.ಬಿ.ಭಾನುಪ್ರಕಾಶ್, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.