ಯೋಜನೆಗಳು ಜನರಿಗೆ ತಲುಪಿದಾಗ ಮಾತ್ರ ಯಶಸ್ವಿಯಾಗುತ್ತದೆ 

ಬೆಂಗಳೂರು : ಸರ್ಕಾರ ಎಲ್ಲಾ ಯೋಜನೆಗಳು ಜನರಿಗೆ ತಲುಪಬೇಕು. ಆಗ ಮಾತ್ರ ನಮ್ಮ ಯೋಜನೆಗಳು ಯಶಸ್ವಿಯಾಗುತ್ತದೆ. ಹೀಗಾಗಿ, ಎಲ್ಲರೂ ಈ ನಿಟ್ಟಿನಲ್ಲಿ ಕೆಸಲ ಮಾಡಬೇಕೆಂದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಪಕ್ಷ ಹಾಗೂ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ರೈತರಿಗೆ, ಹಾಲು ಉತ್ಪಾದಕರಿಗೆಂದು ಈ ಭಾರಿ ಬಜೆಟ್ ನಲ್ಲಿ ವಿಶೇಷವಾದ ಯೋಜನೆಗಳನ್ನು ಘೋಷಿಸಿದ್ದೇವೆ. ೩೩ ಲಕ್ಷ ರೈತರಿಗೆ ನಮ್ಮ ಸರ್ಕಾರ ಈ ಭಾರಿ ಶೂನ್ಯ ಬಡ್ಡಿದರದಲ್ಲಿ ಸಾಲ ವಿತರಿಸಲಿದೆ. ಕೃಷಿ ಹಾಗೂ ಅದರ ಪೂರಕ ಚಟುವಟಿಕೆಗಳ ಉತ್ತೇಜಿಸುವುದು ನಮ್ಮ ಸರ್ಕಾರದ ಗುರಿಯಾಗಿದೆ. ಹಾಗೆನೇ, ಶೈಕ್ಷಣಿಕ ಕ್ಷೇತ್ರಕ್ಕೂ ಹಲವು ವಿಶೇಷವಾದ ಕಾರ್ಯಕ್ರಮಗಳನ್ನು ರೂಪಿಸಿರುವುದಾಗಿ ತಿಳಿಸಿದರು.