ಶಿಕಾರಿಪುರ : ಮಾಜಿ ಸಿಎಂ ಯಡಿಯೂರಪ್ಪ ಪುತ್ರನಿಗಾಗಿ ತಮ್ಮ ಶಿಕಾರಿಪುರ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದಾರೆ. ಮುಂದಿನ ಚುನಾವಣೆಯಲ್ಲಿ ವಿಜಯೇಂದ್ರ ಶಿಕಾರಿಪುರದಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎಂದು ಬಿಎಸ್‌ವೈ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾನು ಶಿಕಾರಿಪುರದಲ್ಲಿ ನಿಲ್ಲುತ್ತಿಲ್ಲ. ವಿಜಯೇಂದ್ರ ಅವರೇ ಶಿಕಾರಿಪುರದಲ್ಲಿ ಸ್ಪರ್ಧೆ ಮಾಡುತ್ತಾರೆ. ಬಹಳ ದೊಡ್ಡ ಅಂತರದಲ್ಲಿ ಅವನನ್ನು ಗೆಲ್ಲಿಸಿಕೊಡಬೇಕು ಅಂತಾ ಶಿಕಾರಿಪುರ ಜನತೆಯಲ್ಲಿ ಕೈಜೋಡಿಸಿ ಪ್ರಾರ್ಥನೆ ಮಾಡುತ್ತಿದ್ದೇನೆ ಎಂದು ಮನವಿ ಮಾಡಿದರು. ಹಳೆ ಮೈಸೂರು ಭಾಗದಲ್ಲಿ ಸ್ಪರ್ಧೆ ಮಾಡಬೇಕು ಎಂಬ ಒತ್ತಾಯ ಇದೆ. ಆದರೆ ನಾನು ಕ್ಷೇತ್ರ ಖಾಲಿ ಮಾಡುತ್ತಿರುವುದರಿಂದ ವಿಜಯೇಂದ್ರ ಶಿಕಾರಿಪುರದಲ್ಲಿ ನಿಲ್ಲಲಿದ್ದಾರೆ ಎಂದು ತಿಳಿಸಿದರು. ಈ ಮೂಲಕ ಬಿ.ವೈ.ವಿಜಯೇಂದ್ರ ಅವರ ರಾಜಕೀಯ ಜೀವನಕ್ಕೆ ಹೊಸ ತಿರುವು ಸಿಗುವು ಸಾಧ್ಯತೆಗಳಿಗೆ. ಈ ಮೊದಲು ವಿಧಾನ ಪರಿಷತ್ ಚುನಾವಣೆಗೆ ವಿಜಯೇಂದ್ರ ನಿಲ್ತಾರೆ ಎಂದು ಹೇಳಲಾಗಿತ್ತು ಆದ್ರೆ ಅವರಿಗೆ ಟಿಕೆಟ್ ಕೊಟ್ಟಿರಲಿಲ್ಲ. ಹಾಗೇನೆ ಅವರು ಹಳೆ ಮೈಸೂರು ಭಾಗದಲ್ಲಿ ಚುನಾವಣೆಗೆ ನಿಲ್ತಾರೆ ಎನ್ನುವ ಮಾತುಗಳು ಕೂಡ ಕೇಳಿಬಂದಿದ್ದವು, ಅದೇ ರೀತಿ ವಿಜಯೇಂದ್ರ ಕೂಡ ಆ ಭಾಗದಲ್ಲಿಯೇ ಹೆಚ್ಚು ಕ್ರಿಯಾಶೀಲರಾಗಿದ್ರು. ಆದ್ರೀಗ ಬಿಎಸ್‌ವೈ ಘೋಷಣೆಯಿಂದ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಸಿಕ್ಕಂತೆ ಆಗಿದೆ.
ಯಡಿಯೂರಪ್ಪ ರಾಜಕೀಯ ವಿಚಾರವಾಗಿ ಹುಟ್ಟಿಕೊಂಡ ನೂರಾರು ಪ್ರಶ್ನೆಗಳು
೨೦೨೩ರ ಚುನಾವಣೆಗೆ ಮಾಜಿ ಸಿಎಂ ಯಡಿಯೂಪ್ಪ ಸ್ಪರ್ಧೆ ಮಾಡ್ತಾರೋ.. ಇಲ್ವೋ...? ಅನ್ನೋ ಪ್ರಶ್ನೆ ಹುಟ್ಟಿಕೊಂಡಿದೆ. ಯಾಕೆಂದ್ರೆ ಶಿಕಾರಿಪುರದಿಂದ ಪುತ್ರ ವಿಜಯೇಂದ್ರ ಸ್ಪರ್ಧೆ ಮಾಡ್ತಾರೆ ಅಂತ ಅವರೇ ಘೋಷಣೆ ಮಾಡಿದ್ದಾರೆ. ಹಾಗಾಗಿ ಬಿ.ಎಸ್.ವೈ ರಾಜಕೀಯ ಜೀವನ ಇಲ್ಲಿಗೆ ಮುಕ್ತಾಯವಾಗುತ್ತಾ..? ಬೇರೆ ಕ್ಷೇತ್ರದಿಂದ ಸ್ಪರ್ಧೆ ಮಾಡ್ತಾರಾ ಅನ್ನೋ ಪ್ರಶ್ನೆ ಹುಟ್ಟಿಕೊಂಡಿದೆ. ಒಂದು ವೇಳೆ ಬೇರೆ ಕ್ಷೇತ್ರದಿಂದ ಸ್ಪರ್ಧೆ ಮಾಡೋದಾದ್ರೆ ಅದಕ್ಕೆ ಹೈಕಮಾಂಡ್ ಒಪ್ಪಿಗೆ ಕೊಡುತ್ತಾ... ಸ್ಪರ್ಧೆಗೆ ಅವಕಾಶ ನೀಡ್ತಾರಾ..? ಅನ್ನೋ ಪ್ರಶ್ನೆ ಸಹಜವಾಗಿಯೇ ಹುಟ್ಟಿಕೊಳ್ಳುತ್ತೆ. ೭೫ ವರ್ಷ ದಾಟಿದ ನಂತರ ಬಿಜೆಪಿಯಲ್ಲಿ ಟಿಕೆಟ್ ಸಿಗೋದು ಅನುಮಾನ. ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸೋದಕ್ಕೂ ವಯಸ್ಸೇ ಕಾರಣವಾಗಿತ್ತು. ಹಾಗಾದ್ರೆ ಬಿ.ಎಸ್. ಯಡಿಯೂರಪ್ಪ ಮುಂದೆ ಏನ್ ಮಾಡ್ತಾರೆ ಅನ್ನೋದು ಸಹಜವಾಗಿಯೇ ಕುತೂಹಲ ಮೂಡಿಸುವಂತೆ ಮಾಡಿದೆ.