ಗಲಭೆ ಹಿಂದೆ ಕಾಂಗ್ರೆಸ್ ಕೈವಾಡವಿದೆ : ಎಂ.ಪಿ.ರೇಣುಕಾಚಾರ್ಯ 

ಹೊನ್ನಾಳಿ : ಹಳೆ ಹುಬ್ಬಳ್ಳಿಯಲ್ಲಿ ನಡೆದ ಗಲಭೆಯ ಹಿಂದೆ ಕಾಂಗ್ರೆಸ್‌ನವರ ಕೈವಾಡವಿದೆ ಎಂದು ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಆರೋಪಿಸಿದ್ದಾರೆ.

ಗಲಭೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರದಲ್ಲಿ ನರೇಂದ್ರ ಮೋದಿ ಉತ್ತಮ ಆಡಳಿತ ನೀಡ್ತಾಯಿದ್ದಾರೆ. ಅದೇ ರೀತಿ ರಾಜ್ಯದಲ್ಲಿ ಎರಡೆರಡು ಬಾರಿ ಬಿ.ಎಸ್.ಯಡಿಯೂರಪ್ಪ ಹಾಗೂ ಈಗ ಬಸವರಾಜ ಬೊಮ್ಮಾಯಿ ಒಳ್ಳೆಯ ಆಡಳಿತ ನಡೆಸ್ತಾಯಿದ್ದಾರೆ. ಕಾಂಗ್ರೆಸ್‌ನವರು ಓಟ್ ಬ್ಯಾಂಕ್ ರಾಜಕಾರಣ ಮಾಡ್ತಾಯಿದ್ದಾರೆ. ಒಂದು ವಾಟ್ಸಪ್ ಸ್ಟೇಟಸ್‌ಗೆ ಇಷ್ಟೆಲ್ಲ ಗಲಭೆ ಸೃಷ್ಟಿಸಲಾಗಿದೆ. ಇದರ ಹಿಂದೆ ಕಾಂಗ್ರೆಸ್‌ನವರ ಕೈವಾಡವಿದೆ. ಇನ್ಮುಂದೆ ಇದೇ ರೀತಿ ಉದ್ಘಟತನ ತೋರಸಿದ್ರೆ ನಾವು ಹಿಂದುಗಳು ಏನೆಂದು ತೋರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.