ಬಿಜೆಪಿ ಕಚೇರಿಯಲ್ಲಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನಾಚರಣೆ

ಶಿವಮೊಗ್ಗ :  ಬಿಜೆಪಿ ಕಚೇರಿಯಲ್ಲಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನಾಚರಣೆ ಆಸರಿಸಲಾಯಿತು. ಈ ವೇಳೆ ಮಾತನಾಡಿದ ಬಿಜೆಪಿಯ ಹಿರಿಯ ನಾಯಕ ಡಿ.ಹೆಚ್.ಶಂಕರಮೂರ್ತಿ, ವಾಜಪೇಯಿ ಹಾಗೂ ಅವರೊಂದಿಗೆ ಕಳೆದ ಹಳೆಯ ದಿನಗಳನ್ನ ನೆನಪಿಸಿಕೊಂಡರು.

ಅಲ್ಲದೆ ವಾಜಪೇಯಿಯವರು ಶಿವಮೊಗ್ಗಕ್ಕೆ ಬಂದಾಗಿನ ಸಂದರ್ಭಗಳನ್ನ ನೆನೆದರು. ಈ ವೇಳೆ ಕಾರ್ಯಕ್ರಮದಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಮಹಾನಗರ ಪಾಲಿಕೆ ಆಡಳಿತ ಪಕ್ಷದ ನಾಯಕ ಚೆನ್ನಬಸಪ್ಪ ಹಾಗೂ ಇನ್ನಿತರರು ಉಪಸ್ಥಿತರಿದ್ದರು.