ಶಿವಮೊಗ್ಗ : ಡಿಎಸ್‌ಎಸ್ ಸ್ಥಾಪಕ ಪ್ರೊ.ಬಿ.ಕೃಷ್ಣಪ್ಪನವರ ೮೫ನೇ ಜನ್ಮದಿನವನ್ನು ಶಿವಮೊಗ್ಗದಲ್ಲಿ ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಡಿಎಸ್‌ಎಸ್ ರಾಜ್ಯ ಸಂಚಾಲಕ ಗುರುಮೂರ್ತಿ ತಿಳಿಸಿದರು.
ಈ ಕುರಿತು ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಜೂನ್ ೯ರಂದು ಕುವೆಂಪು ರಂಗಮಂದಿರದಲ್ಲಿ ಡಿಎಸ್‌ಎಸ್ ಹಾಗೂ ಕರ್ನಾಟಕ ದಲಿತ ನೌಕರರ ಒಕ್ಕೂಟದ ವತಿಯಿಂದ ಪ್ರೊ.ಬಿ.ಕೃಷ್ಣಪ್ಪನವರ ಜನ್ಮ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ನೆರವೇರಿಸಲಿದ್ದಾರೆ. ಡಿಎಸ್‌ಎಸ್ ನೌಕರರ ಒಕ್ಕೂಟದ ಜಿಲ್ಲಾಧ್ಯಕ್ಷ ಬಿ.ಎಲ್.ರಾಜು ಪ್ರೊ.ಬಿ.ಕೃಷ್ಣಪ್ಪನವರ ಕುರಿತಾಗಿ ಪ್ರಾಸ್ತಾವಿಕ ನುಡಿಗಳನ್ನಾಡುವರು ಎಂದು ಮಾಹಿತಿ ನೀಡಿದರು.