ಜಿಲ್ಲಾಡಳಿತದ ವಿರುದ್ಧ ಮಕ್ಕಳ ಪ್ರತಿಭಟನೆ

ಶಿವಮೊಗ್ಗ : ಹೊಸ ಶೈಕ್ಷಣಿಕ ವರ್ಷದಲ್ಲಿ ಸಂತೋಷದಿಂದ ಶಾಲೆಗೆ ಹೋಗಬೇಕಿದ್ದ ಮಕ್ಕಳು ರೋಡಿಗಿಳಿದು ಪ್ರತಿಭಟಿಸಿದ್ದಾರೆ. ಶಾಲೆಯಲ್ಲಿ ಕೂತು ಪಾಠ ಕೇಳಬೇಕದ್ದ ವಿದ್ಯಾರ್ಥಿಗಳು ಜಿಲ್ಲಾಡಳಿತದ ವಿರುದ್ಧ ಘೋಷಣೆ ಕೂಗಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಕೆಲ ತಿಂಗಳ ಹಿಂದೆ ಸುರಿದ ಅಕಾಲಿಕ ಮಳೆಯಿಂದ ಶಾಲೆಯು ಶಿಥಿಲಾಗಿತ್ತು, ಬಳಿಕ ಬಾಡಿಗೆ ಕಟ್ಟಡದಲ್ಲಿ ತರಗತಿಗಳು ನಡೆಯುತ್ತಿದ್ದವು. ಆದರೆ ಈಗ ಆ ಕಟ್ಟಡಗಳ ಬಾಡಿಗೆ ಕಟ್ಟಿಲ್ಲ. ಹೀಗಾಗಿ ಶಿಥಿಲಗೊಂಡಿರುವ ಕಟ್ಟಡದಲ್ಲಿಯೇ ತರಗತಿ ನಡೆಸಲು ಮುಂದಾಗಿದ್ದಾರೆ. ಹೀಗಾಗಿ ಶಾಲೆಯ ಕಟ್ಟಡ ಅಭಿವೃದ್ಧಿ ಪಡಿಸದೆ ಜಿಲ್ಲಾಡಳಿತ ನಿರ್ಲಕ್ಷ ತೋರುತ್ತಿದೆ ಎಂದು ಡಾ.ಬಿ.ಆರ್.ಅಂಬೇಡ್ಕರ್ ನ್ಯೂಮಂಡ್ಲಿ ನಾಗರೀಕರ ಹಿತರಕ್ಷಣಾ ಸಮಿತಿಯು ಮಕ್ಕಳೊಂದಿಗೆ ಪ್ರತಿಭಟನೆ ನಡೆಸಿದೆ.