ಕಾಲೇಜು ವಿದ್ಯಾರ್ಥಿಗಳಿಗಾಗಿ ಕಾಲೇಜು ರಂಗೋತ್ಸವ

ಶಿವಮೊಗ್ಗ :   ರಂಗಾಯಣದಿಂದ ಕಾಲೇಜು ವಿದ್ಯಾರ್ಥಿಗಳಿಗಾಗಿ ಕಾಲೇಜು ರಂಗೋತ್ಸವ ನಡೆಸಲಾಗುತ್ತಿದೆ ಎಂದು ಶಿವಮೊಗ್ಗ ರಂಗಾಯಣ ನಿರ್ದೇಶಕ ಸಂದೇಶ್ ಜವಳಿ ಹೇಳಿದರು. ಈ ಕುರಿತಾಗಿ ನಮ್ಮ ಕನ್ನಡ ಮೀಡಿಯಂ ಜೊತೆ ಮಾತನಾಡಿದ ಅವರು, ಶಿವಮೊಗ್ಗ ರಂಗಾಯಣದಿಂದ ಕಾಲೇಜು ವಿದ್ಯಾರ್ಥಿಗಳಿಗಾಗಿ ಕಾಲೇಜು ರಂಗೋತ್ಸವ ಯೋಜನೆ ಹಮ್ಮಿಕೊಳ್ಳಲಾಗಿದೆ.

ಹೀಗಾಗಿ ಶಿವಮೊಗ್ಗ ರಂಗಾಯಣ ವ್ಯಾಪ್ತಿಯ 9ಜಿಲ್ಲೆಗಳಲ್ಲಿ 5 ಜಿಲ್ಲೆಗಳಿಂದ ಪ್ರತಿ ಜಿಲ್ಲೆಗೆ ಮೂರು ಕಾಲೇಜುಗಳನ್ನ ಕಾಲೇಜು ರಂಗೋತ್ಸವಕ್ಕೆ ಆಯ್ಕೆ ಮಾಡಿಕೊಳ್ಳಲಾಗಿದೆ. ಈ ಕಾಲೇಜುಗಳಿಂದ ಪ್ರದರ್ಶನಗೊಳ್ಳುವ ನಾಟಕಗಳ ಖರ್ಚನ್ನ ಶಿವಮೊಗ್ಗ ರಂಗಾಯಣವೇ ಭರಿಸಲಿದೆ. ಪ್ರತಿ ಜಿಲ್ಲೆಯಲ್ಲಿಯೂ ಜಿಲ್ಲಾ ನಾಟಕೋತ್ಸವ ನಡೆಯಲಿದೆ. ಇಲ್ಲಿ ಆಯ್ಕೆಯಾದ ಒಂದೊಂದು ನಾಟಕಗಳನ್ನ ಜನವರಿ ಕಡೆಯ ವಾರದಲ್ಲಿ ಶಿವಮೊಗ್ಗದಲ್ಲಿ 5 ದಿನಗಳ ನಾಟಕೋತ್ಸವದಲ್ಲಿ ಪ್ರದರ್ಶಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.