ಕಚ್ಚ ವಸ್ತುಗಳ ಬೆಲೆ ಏರಿಕೆಗೆ ಖಂಡನೆ

ಶಿವಮೊಗ್ಗ : ಕೈಗಾರಿಕೆಗಳಿಗೆ ಅಗತ್ಯವಿರುವ ಸ್ಟೀಲ್ ಹಾಗೂ ಇನ್ನಿತರ ಕಚ್ಚ ವಸ್ತುಗಳ ಬೆಲೆ ಏರಿಕೆಯಾಗಿರುವುದನ್ನ ಖಂಡಿಸಿ ಮಾಚೇನಹಳ್ಳಿ ಇಂಡಸ್ಟ್ರೀಸ್ ಅಸೋಸಿಯೇಷನ್ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಮಾತನಾಡಿದ ಮಾಚೇನಹಳ್ಳಿ ಇಂಡಸ್ಟ್ರೀಸ್ ಅಸೋಸಿಯೇಷನ್ ಆಧ್ಯಕ್ಷ ರಮೇಶ್ ಹೆಗಡೆ, ಕಚ್ಚಾ ವಸ್ತುಗಳ ಬೆಲೆ ಏರಿಕೆ ಖಂಡಿಸಿ ದೇಶದಾದ್ಯಂತ ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಸಂಘಗಳು ಒಂದು ದಿನದ ಮುಷ್ಕರಕ್ಕೆ ಮುಂದಾಗಿವೆ. ಒಂದು ಒಂದೂವರೆ ವರ್ಷದಿಂದ ಕಚ್ಚಾ ವಸ್ತುಗಳ ಬೆಲೆ ೬೦ರಿಂದ ೭೦ ಪರ್ಸೆಂಟ್ ಜಾಸ್ತಿಯಾಗಿದೆ. ಪ್ರಧಾನಿಗಳು ಹೇಳಿದ ಹಾಗೆ ಕೋವಿಡ್ ಸಮಯದಲ್ಲಿ ಲಾಕ್‌ಡೌನ್ ಆದಾಗ ಕೂಡ ನಮ್ಮ ಕೆಲಸಗಾರರಿಗೆ ಸಂಬಳ ನೀಡಿದ್ದೇವೆ. ಆದ್ರೆ ಈ ರೀತಿಯಾಗಿ ಕಚ್ಚ ವಸ್ತುಗಳ ಬೆಲೆ ಏರಿಕೆಯಿಂದಾಗಿ ನಮಗೆ ಬಹಳ ಸಂಕಷ್ಟ ಎದುರಾಗಿದೆ ಎಂದರು.