ಶಿವಮೊಗ್ಗ : 30 ವರ್ಷಗಳಿಂದ ಬಡಜನರ ಪರವಾಗಿ ಹೋರಾಟ ಮಾಡುತ್ತಿರುವ ಮಾನವ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್.ರಾಜುಗೆ ಅಭಿನಂದನಾ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಮಾರ್ಚ್ ೧೪ರಂದು ಭದ್ರಾವತಿಯ ಎಲ್ಲಾ ನಾಗರೀಕರು, ಸಂಘ ಸಂಸ್ಥೆಗಳು ಹಾಗೂ ಪಕ್ಷಗಳ ಸಮ್ಮುಖದಲ್ಲಿ ಅಭಿನಂದನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಬಡವರಿಗೆ ನ್ಯಾಯ ಕೊಡಿಸುವ ಸಲುವಾಗಿ ಹಲವು ಬಾರು ಜೈಲು ವಾಸ ಅನುಭವಿಸಿರುವ ರಾಜು ಅವರು, ಸಾಕಷ್ಟು ಬಾರಿ ಉಪವಾಸ ಸತ್ಯಗ್ರಹ ಹಾಗೂ ಪಾದಯಾತ್ರೆ ಮಾಡಿದ್ದಾರೆ. ಇವರ ಸಮಾಜ ಸೇವೆಗಾಗಿ ಭದ್ರಾವತಿಯ ಬಸವೇಶ್ವರ ವೃತ್ತದಲ್ಲಿರುವ ಅಕ್ಕಮಹಾದೇವಿ ಭವನದಲ್ಲಿ ಅಭಿನಂದನಾ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಮಾನವ ಹಕ್ಕು ಹೋರಾಟ ಸಮಿತಿಯವರು ಮಾಧ್ಯಮಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಈ ಮೂಲಕ ಜನರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮಕ್ಕೆ ಆಗಮಿಸುವಂತೆ ಮನವಿ ಮಾಡಿಕೊಂಡರು.