ಶಿವಮೊಗ್ಗ : ಸೋಗಾನೆಯ ಸರ್ವೇ ನಂಬರ್ 120ರ 100 ಎಕರೆ ಜಾಗದಲ್ಲಿ ಆಯುಷ್ ವಿಶ್ವವಿದ್ಯಾಲಯ ಸ್ಥಾಪಿಸಲು ಕರ್ನಾಟಕ ರಾಜ್ಯ ಸರ್ಕಾರ ರಾಜ್ಯಪತ್ರ ಹೊರಡಿಸಿ ಅನುಮೋದನೆ ನೀಡಿದೆ.
ಈ ಕುರಿತು ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರದ ವ್ಯವಸ್ಥಾಪಕ ಟ್ರಸ್ಟಿಯಾಗಿರುವ ಕಲ್ಲೂರು ಮೇಘರಾಜ್, ಆಯುಷ್ ವಿವಿ ಸ್ಥಾಪನೆಯಾಗಲು ಕೆಲವು ನಿಬಂಧನೆಗಳಿರುತ್ತವೆ. ಆ ಎಲ್ಲಾ ನಿಬಂಧನೆಗಳನ್ನು ಅನುಸರಿಸಿ ಶಿವಮೊಗ್ಗದಲ್ಲಿ ಪ್ರತಿಷ್ಠಿತ ಆಯುಷ್ ವಿವಿ ಸ್ಥಾಪನೆಯಾಗಲಿದೆ. ಶಿವಮೊಗ್ಗದಲ್ಲಿ ವಿವಿ ಸ್ಥಾಪಿಸಲು ಸಹಕರಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಮಾಜಿ ಸಭಾಪತಿ ಡಿ.ಹೆಚ್.ಶಂಕರಮೂರ್ತಿ, ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ಅವರಿಗೆ ಅಭಿನಂದನೆ ಸಲ್ಲಿಸಿದರು.