ಶಿವಮೊಗ್ಗ : ಉಡುಪಿ-ಮಂಗಳೂರು ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು. ಕುವೆಂಪು ರಂಗಮಂದಿರದಲ್ಲಿ ನೆಡೆದ ಕಾರ್ಯಕ್ರಮವನ್ನು ಮಾಜಿ ಸಚಿವ ಎಂ.ಬಿ.ಪಾಟೀಲ್ ಉದ್ಘಾಟಿಸಿದರು. ಮಂಗಳೂರು ರಾಮಕೃಷ್ಣ ಮಠದ ಸ್ವಾಮಿ ಜಿತಕಾಮಾನಂದಜಿ ಕಾರ್ಯಕ್ರಮ ದಿವ್ಯ ಸಾನ್ನಿಧ್ಯ ವಹಿಸಿಕೊಂಡಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಉಪಮುಖ್ಯಮಂತ್ರಿ ಪರಮೇಶ್ವರ್ ವಹಿಸಿಕೊಂಡಿದ್ದರು. ಕಾರ್ಯಕ್ರಮದಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಸೇರಿದಂತೆ ಕಾಂಗ್ರೆಸ್ ನಾಯಕರು, ಕಾರ್ಯಕ್ರರ್ತರು ಉಪಸ್ಥಿತರಿದ್ದರು.