ಶಿವಮೊಗ್ಗ : ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಖಂಡಿಸಿ ಶಿವಮೊಗ್ಗದಲ್ಲಿ ಕಾಂಗ್ರೆಸ್ ವತಿಯಿಂದ ಪಾದಯಾತ್ರೆ ನಡೆಸಲಾಯಿತು. ಮೋದಿ ಸರಕಾರದಲ್ಲಿ ಅಗತ್ಯ ವಸ್ತುಗಳ ಬೆಲೆ ದಿನೇ ದಿನೇ ಏರಿಕೆಯಾಗುತ್ತಲೇ ಇದೆ. ಬೆಲೆ ಏರಿಕೆಗೆ ಕಡಿವಾಣ ಹಾಕಿಲ್ಲ. ಜನಸಾಮಾನ್ಯವರು ಬಡವರ್ಗದವರು ನಲುಗಿ ಹೋಗಿದ್ದಾರೆ ಎಂದು ಆರೋಪಿಸಿ ಶಿವಪ್ಪ ನಾಯಕ ವೃತ್ತದಿಂದ ಪಾದಯಾತ್ರೆ ನಡೆಸಿದರು.
ಕೇಂದ್ರ ಮತ್ತು ರಾಜ್ಯ ಸರಕಾರದ ವಿರುದ್ಧ ಘೋಷಣೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್. ಎಸ್. ಸುಂದರೇಶ್, ಪಾಲಿಕೆ ವಿಪಕ್ಷ ನಾಯಕಿ ಯಮುನಾ ರಂಗೇಗೌಡ ಸೇರಿದಂತೆ ಇತರರು ಪಾಲ್ಗೊಂಡಿದ್ದರು.