ಸೋನಿಯಾ ಗಾಂಧಿ ಇಡಿ ವಿಚಾರಣೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಶಿವಮೊಗ್ಗ : ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯನು ಇಡಿ ನಿರ್ದೇಶನಾಲಯ ಗುರವಾರ ವಿಚಾರಣೆಗೆ ಒಳಪಡಿಸಿತ್ತು.ಹಾಗೇನೆ ಜುಲೈ ೨೫ರಂದು ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಕೂಡ ನೀಡಿದೆ.

ಈ ಹಿನ್ನೆಲೆ ದೇಶದ್ಯಾಂತ ಕಾಂಗ್ರೆಸ್ ಪ್ರತಿಭಟನೆ ನಡೆಸ್ತಾಯಿದೆ. ಶಿವಮೊಗ್ಗದಲ್ಲಿಯೂ ಬಿಜೆಪಿ ಸರ್ಕಾರ ತನಿಖಾ ಸಂಸ್ಥೆಗಳನ್ನು ಕೈಗೊಂಬೆಯನ್ನಾಗಿ ಮಾಡಿಕೊಂಡಿದೆ ಎಂದು ಆರೋಪಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಶಿವಪ್ಪನಾಯಕ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ತನಕ ಪ್ರತಿಭಟನಾ ಮೆರವಣಿಗೆ ನಡೆಸಿ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ರು. ದಾರಿಯುದ್ದಕ್ಕೂ ಕೇಂದ್ರ ಹಾಗೂ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ರು.