ಈಶ್ವರಪ್ಪ ರಾಜೀನಾಮೆಗೆ ಬಿಗಿ ಪಟ್ಟು 

ಶಿವಮೊಗ್ಗ : ಸಚಿವ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಬಿಗಿ ಪಟ್ಟು ಹಿಡಿದಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೂಚನೆಯಂತೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ. ಈ ಹಿನ್ನೆಲೆ ಈಶ್ವರಪ್ಪ ಕ್ಷೇತ್ರ ಶಿವಮೊಗ್ಗದಲ್ಲಿಯೂ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿ, ಈಶ್ವರಪ್ಪ ಪ್ರತಿಕೃತಿ ದಹಿಸಿ ರಾಜೀನಾಮೆಗೆ ಒತ್ತಾಯಿಸಿದ್ದಾರೆ.

ಈಶ್ವರಪ್ಪ ಶಿವಮೊಗ್ಗ ಜಿಲ್ಲೆಯ ಮರ್ಯಾದೆಯನ್ನು ತೆಗೆದಿದ್ದಾರೆ. ಸಂತೋಶ್ ಪಾಟೀಲ್ ಆತ್ಮಹತ್ಯೆ ಹಿಂದೆ ಪಿತೂರಿ ಸಂಚಿದೆ. ಕಮೀಷನ್ ವಿಚಾರವಾಗಿ ಸಂತೋಷ್ ಪಾಟೀಲ್ ನೀಡಿದ್ದ ದೂರಿಗೆ ಯಾರೂ ತಲೆಕಡಿಸಿಕೊಂಡಿಲ್ಲ. ಸಂತೋಶ್ ಪಾಟೀಲ್ ಸಾವಿಗೆ ಸಚಿವ ಈಶ್ವರಪ್ಪ ನೇರ ಕಾರಣ. ಹೀಗಾಗಿ ಅವರನ್ನು ಸರ್ಕಾರ ವಜಾ ಮಾಡಬೇಕು. ಹಾಗೂ ಕೂಡಲೇ ಬಂಧಿಸಬೇಕು ಎಂದು ಕಾಂಗ್ರೆಸ್ ಮುಖಂಡರು ಆಗ್ರಹಿಸಿದ್ದಾರೆ. ಆದ್ರೆ, ಸದ್ಯಕ್ಕೆ ಕಾಂಗ್ರೆಸ್‌ನ ಯಾವುದೇ ಪ್ರತಿಭಟನೆಗೆ ಭಗ್ಗದ ಈಶ್ವರಪ್ಪ ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ ಎಂದು ಪುನರುಚ್ಚರಿಸಿದ್ದಾರೆ.