ಸಚಿವ ಈಶ್ವರಪ್ಪ ರಾಜೀನಾಮೆಗೆ ಕಾಂಗ್ರೆಸ್ ಪಟ್ಟು 

ಶಿವಮೊಗ್ಗ : ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪರನ್ನು ಕೂಡಲೇ ಸಂಪುಟದಿಂದ ವಜಾಗೊಳಿಸಿ, ತನಿಖೆ ನಡೆಸಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ನಡೆಸ್ತಾ ಇರೋ ಪ್ರತಿಭಟನೆ ತೀವ್ರಗೊಂಡಿದೆ.

ಶಿವಮೊಗ್ಗದ ಕಾಂಗ್ರೆಸ್ ಕಚೇರಿಯಿಂದ ಮೆರವಣಿಗೆ ಮೂಲಕ ಬಂದು, ಸಚಿವರ ಮನೆಗೆ ಮುತ್ತಿಗೆ ಹಾಕಲು ಮುಖಂಡರು ಯತ್ನಿಸಿದ್ದಾರೆ. ಸಚಿವ ಈಶ್ವರಪ್ಪ ರಾಜೀನಾಮೆ ನೀಡೋದಿಲ್ಲವೆಂದು ಹೇಳಿದ್ದರೂ ಸಹ ಹೋರಾಟಗಳು ತೀವ್ರಗೊಳ್ಳುತ್ತಿದ್ದು, ಸರಕಾರ ಮುಂದೆ ಏನ್ ಮಾಡುತ್ತೆ ಅನ್ನೋ ಕುತೂಹಲ ಕೆರಳಿಸಿದೆ.