ಸಂಜೆ ಪರಿಸ್ಥಿತಿ ಅವಲೋಕಿಸಿ ಮುಂದಿನ ತೀರ್ಮಾನ : ಡಿಸಿ

ಶಿವಮೊಗ್ಗ : ಸಂಜೆಯ ಪರಿಸ್ಥಿತಿಯನ್ನ ನೋಡಿಕೊಂಡು ಮುಂದಿನ ತೀರ್ಮಾನಗಳನ್ನ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಶಾಂತಿ ಕಾಪಾಡಲು ಬೇರೆ ಕಡೆಯಿಂದಲೂ ಪೊಲೀಸರನ್ನ ಕರೆಸಲಾಗಿದೆ.

ಬೆಳಗ್ಗೆ ಕೂಡ ಕೆಲ ಘಟನೆಗಳು ನಡೆದಿವೆ. ಹೀಗಾಗಿ ಸಂಜೆಯ ಪರಿಸ್ಥಿತಿಯನ್ನ ನೋಡಿ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು. ಸೋಮವಾರ ನಡೆದ ಶವಯಾತ್ರೆ ಮೆರವಣಿಗೆ ಕುರಿತಾಗಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಮೆರವಣಿಗೆಗೆ ನಾವು ಅವಕಾಶ ಕೊಟ್ಟಿಲ್ಲ ಎಂದಷ್ಟೆ ಹೇಳಿದರು.