ವಿವಿಧ ಕಾಮಗಾರಿಗಳ ಉದ್ಘಾಟನೆಗೆ ಶಂಕುಸ್ಥಾಪನೆ 

ಕೋಡೂರು : ಹೊಸನಗರದ ಕೋಡೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮ ನಡೆಯಿತು. ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ಶಾಸಕ ಹರತಾಳು ಹಾಲಪ್ಪ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮಗಳು ನಡೆದವು.

ಈ ವೇಳೆ ಅಂಬೇಡ್ಕರ್ ವಸತಿ ಶಾಲೆಗೆ ಶಂಕುಸ್ಥಾಪನೆ, ಶಂಕರೇಶ್ವರ ದೇವಸ್ಥಾನ ಹಾಗೂ ಹಳೆ ಕೋಟೆ ರಸ್ತೆ ಮರು ಡಾಂಬರೀಕರಣ ಕಾಮಗಾರಿಗೆ ಗುದ್ದಲಿ ಪೂಜೆ, ಹಿಂಡ್ಲೆಮನೆ ಸರ್ಕಾರಿ ಶಾಲೆಗೆ ಹೆಚ್ಚುವರಿ ಕೊಠಡಿ ಉದ್ಘಾಟನೆ ಸೇರಿಂದತೆ, ಕೋಡುರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರ್ಹ ಫಲಾನುಭಾವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡಲಾಗಿದೆ.