ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ 

ಶಿವಮೊಗ್ಗ : ಶಿವಮೊಗ್ಗ-ತೀರ್ಥಹಳ್ಳಿ ಎನ್‌ಹೆಚ್ ೧೬೯ರಿಂದ ಕಲ್ಲೂರು ಬಸವಾಪುರ ಮಾರ್ಗವಾಗಿ ಹಾಯ್‌ಹೊಳೆ ರಸ್ತೆಯ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನಾ ಕಾರ್ಯಕ್ರಮ ನಡೆಯಿತು.

ಅಗಸವಳ್ಳಿ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಭೂಮಿಪೂಜೆಯನ್ನು ನೆರವೇರಿಸಿಕೊಟ್ಟರು. ಶಾಸಕ ಕೆ.ಬಿ.ಅಶೋಕ ನಾಯ್ಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡಿದ್ದರು. ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ ಹಾಗೂ ರುದ್ರೇಗೌಡ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.