ಶಿವಮೊಗ್ಗ : ಶ್ರೀ ಆದಿಚುಂಚನಗಿರಿ ಪ್ರೌಢಶಾಲೆಯಲ್ಲಿ ಶಾಲಾ ಗ್ರಾಹಕರ ಕ್ಲಬ್ ಯೋಜನೆ ಹಾಗೂ ಗ್ರಾಹಕ ಜಾಗೃತಿ ಕಾರ್ಯಕ್ರಮ ನಡೆಯಿತು. ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಇಲಾಖೆ, ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರ, ಶ್ರೀ ಆದಿಚುಂಚನಗಿರಿ ಕನ್ನಡ ಪ್ರೌಢಶಾಲೆ ಹಾಗೂ ವಿವಿಧ ಇಲಾಖೆ ಮತ್ತು ಪ್ರಾಧಿಕಾರಿದ ಸಂಯುಕ್ತಾಶ್ರಯದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಶಿವಣ್ಣ.ಟಿ. ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ರು. ಇನ್ನು ಕಾರ್ಯಕ್ರಮ ಅಧ್ಯಕ್ಷತೆಯನ್ನು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕ ಡಾ.ಟಿ.ಟಿ.ಮಂಜುನಾಥ ವಹಿಸಿಕೊಂಡಿದ್ರು. ಮುಖ್ಯ ಅತಿಥಿಗಳಾಗಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಅಂಕಿತ ಅಧಿಕಾರಿ ಡಾ.ಕೆ.ಪಿ.ಮಧು, ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‌ನ ನಿರ್ದೇಶಕ ಕೊಳಿಗೆ ವಾಸಪ್ಪಗೌಡ, ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕ ಎಸ್. ಮಂಜುನಾಥ್ ಭಾಗಿಯಾಗಿದ್ರು.