ಶಿವಮೊಗ್ಗ : ಸಾರ್ವಜನಿಕರ ಭೇಟಿಗೆ ಜಿಲ್ಲಾಧಿಕಾರಿ ಕಚೇರಿ ಸದಾ ಓಪೆನ್. ಸಭೆ, ಸಮಾರಂಭ ಹೊರತು ಪಡಿಸಿ ತಮ್ಮ ಕೊಠಡಿಗೆ ಸಾರ್ವಜನಿಕರು ಆಗಮಿಸಬಹುದು ಎಂದು ನೂತನ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಹೇಳಿದ್ದಾರೆ.
ಶಿವಮೊಗ್ಗ ಪ್ರೆಸ್‌ಟ್ರಸ್ಟ್ ವತಿಯಿಂದ ಮಾಧ್ಯಮದವರೊಂದಿಗೆ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತಾಡಿದ ಜಿಲ್ಲೆಯಲ್ಲಿನ ಅಕ್ರಮಗಳ ಬಗ್ಗೆ ಮಾಹಿತಿ ನೀಡಿ, ಕ್ರಮ ಕೈಗೊಳ್ಳುತ್ತೇನೆ. ಕೋವಿಡ್ ಕುರಿತು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದೇನೆ ಎಂದು ಅವರು ಹೇಳಿದ್ರು. ಪ್ರೆಸ್‌ಟ್ರಸ್ಟ್ ಅಧ್ಯಕ್ಷ ಎನ್. ಮಂಜುನಾಥ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.