ಶಿವಮೊಗ್ಗ : ಇಲ್ಲಿನ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಆತ್ಮನಿರ್ಭರ ಅರ್ಥವ್ಯವಸ್ಥೆ ಎಂಬ ವಿಷಯದ ಕುರಿತಾಗಿ ಸಂವಾದ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.
ಶಾಂತಲಾ ಸಭಾಂಗಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಬೆಂಗಳೂರಿನ ಹಿರಿಯ ಲೆಕ್ಕ ಪರಿಶೋಧಕ ಜಿ.ವಿ.ಕೃಷ್ಣ ಸಂವಾದದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಸಂವಾದವನ್ನ ಯಶಸ್ವಿಯಾಗಿ ನಡೆಸಿಕೊಟ್ಟರು. ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಎನ್.ಗೋಪಿನಾಥ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡಿದ್ದರು. ಜಿಲ್ಲೆಯ ಉದ್ಯಮಿಗಳು, ವ್ಯಾಪಾರಸ್ಥರು ಈ ಸಂವಾದದಲ್ಲಿ ಪಾಲ್ಗೊಂಡಿದ್ದರು.