ಬೆಂಗಳೂರು : ಗ್ರಾಮೀಣಾಭಿವ್ರದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಶಿವಮೊಗ್ಗ ಮಹಾನಗರ ಪಾಲಿಕೆ ಆಡಳಿತ ಪಕ್ಷದ ನಾಯಕ ಚೆನ್ನಬಸಪ್ಪ ವಿರುದ್ಧ ವಿರುದ್ಧ ತನಿಖೆ ನಡೆಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಆದೇಶಿಸಿದೆ.
ಹರ್ಷ ಹತ್ಯೆ ಪ್ರಕರಣವು ತನಿಖೆ ಹಂತದಲ್ಲಿದ್ದಾಗ ಪ್ರಚೋದನಕಾರಿ ಹೇಳಿಕೆ ನೀಡಿ ಹಿಂದೂ ಮುಸ್ಲಿಂ ಸಮುದಾಯದ ನಡುವೆ ವೈರತ್ವಕ್ಕೆ ದಕ್ಕೆಯುಂಟು ಮಾಡಿದ್ದಾರೆ ಎಂಬ ಆರೋಪ ಇವರಿಬ್ಬರ ಮೇಲಿದೆ. ಈ ಕುರಿತು ಶಿವಮೊಗ್ಗದ ಶಾಂತಿ ಸಂಘಟನೆಯ ರಿಯಾಜ್ ಅಹಮದ್ ಸಲ್ಲಿಸಿರುವ ಖಾಸಗಿ ದೂರಿನ ವಿಚಾರಣೆ ನಡೆಸಿದ ಕೋರ್ಟ್ ತನಿಖೆಗೆ ಆದೇಶಿಸಿದೆ.
ಈ ಕುರಿತು ತನಿಖೆ ನಡೆಸುವಂತೆ ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆಗೆ ನಿರ್ದೇಶಿಸರುವ ನ್ಯಾಯಾಧೀಶೆ ಪ್ರೀತ್.ಜಿ. ವಿಚಾರಣೆಯನ್ನು ಮೇ ೫ಕ್ಕೆ ಮುಂದೂಡಿದ್ದಾರೆ. ಮೇ ೫ರ ಒಳಗೆ ಶಿವಮೊಗ್ಗದ ದೊಡ್ಡಪೇಟೆ ಠಾಣೆಯ ಪೊಲೀಸರು ತನಿಖೆ ನಡೆಸಿ, ವರದಿ ನೀಡಬೇಕೆಂದು ನ್ಯಾಯಾಲಯ ಹೇಳಿದೆ.