ವ್ಯಾಕ್ಸಿನೇಷನ್ ಮಹಾ ಅಭಿಯಾನಕ್ಕೆ ಬಿ.ವೈ.ರಾಘವೇಂದ್ರ ಚಾಲನೆ 

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯಾದ್ಯಂತ ನಡೆಯುತ್ತಿರುವ ವ್ಯಾಕ್ಸಿನೇಷನ್ ಮಹಾ ಅಭಿಯಾನಕ್ಕೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಈ ಒಂದು ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಇಲಾಖೆಯಿಂದ ಒಂದೇ ದಿನ ಒಂದು ಲಕ್ಷ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಹಾಗಾಗಿ ಪ್ರತೀ ಗ್ರಾಮಗಳಲ್ಲೂ ಬೂತ್‌ಗಳನ್ನು ಮಾಡಿಕೊಂಡು ಈಗಾಗಲೇ ವ್ಯಾಕ್ಸಿನೇಶನ್ ನಡೀತಾ ಇದೆ. ಒಟ್ಟು ೩೫೧ ಬೂತ್‌ಗಳಲ್ಲಿ ವ್ಯಾಕ್ಸಿನೇಶನ್ ನೀಡಲಾಗ್ತಿದೆ ಎಂದರುದೀ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ.ಮೇಘರಾಜ್, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಪಾಲಿಕೆ ಸದಸ್ಯರು, ಆರೋಗ್ಯ ಅಧಿಕಾರಿಗಳು ಮತ್ತು ಇತರರು ಹಾಜರಿದ್ದರು.