ಫೆಬ್ರವರಿ 26ರವರೆಗೆ ಕರ್ಫ್ಯೂ ಮುಂದುವರಿಕೆ 

ಶಿವಮೊಗ್ಗ : ನಗರದಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಫೆಬ್ರವರಿ 26ರವರೆಗೆ ಕರ್ಫ್ಯೂ ಮುಂದುವರೆಸಲಾಗಿದೆ. ಈ ಕುರಿತು ಆದೇಶ ಹೊರಡಿಸಿರುವ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ನಗರದಲ್ಲಿ ಜರುಗಿದ ಘಟನೆ ಹಿನ್ನೆಲೆಯಿಂದಾಗಿ ನಗರ ವ್ಯಾಪ್ತಿಯೊಳಗೆ ಬರುವ ಎಲ್ಲಾ ಪ್ರದೇಶಗಳಲ್ಲಿ ಕರ್ಫ್ಯೂ ವಿಧಿಸಿದ್ದಾರೆ.

ಈ ಹಿನ್ನೆಲೆ ನಗರ ವ್ಯಾಪ್ತಿಯಲ್ಲಿ ಐದು ಮತ್ತು ಐದಕ್ಕಿಂತ ಹೆಚ್ಚು ಜನರು ಗುಂಪಾಗಿ ಸೇರುವುದನ್ನು ನಿಬಂಧಿಸಲಾಗಿದೆ. ಎಲ್ಲಾ ವ್ಯಾಪಾರದ ಅಂಗಡಿ ಮುಂಗಟ್ಟುಗಳನ್ನು ಮುಚ್ಚಬೇಕು. ಹಾಲು, ದಿನಸಿ ಮತ್ತು ತರಕಾರಿಗಳ ಖರೀಧಿಗೆ ಬೆಳಗ್ಗೆ 6ಗಂಟೆಯಿಂದ ಬೆಳಗ್ಗೆ 8ಗಂಟೆಯವರೆಗೆ ಮಾತ್ರ ಅನುಮತಿ ನೀಡಲಾಗಿದೆ. ಯಾವುದೇ ಮೆರವಣಿಗೆ, ಸಭೆ, ಸಮಾರಂಭಗಳು, ವಿಜಯೋತ್ಸವ ಹಾಗೂ ಸಾರ್ವಜನಿಕ ಪ್ರತಿಭಟನಾ ಮೆರವಣಿಗೆ, ಜಾಥಾ, ಧರಣಿ, ಮುಷ್ಕರ, ರಾಜಕೀಯ ಸಭೆ, ಸಮಾರಂಭಗಳನ್ನು ನಡೆಸುವಂತಿಲ್ಲ.