ಶಿವಮೊಗ್ಗ : ನವ್ಯಶ್ರೀ ಈಶ್ವರ ವನ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಶಿವರಾತ್ರಿ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಪಾಲ್ಗೊಂಡಿದ್ದರು.
ಕುಟುಂಬ ಸಮೇತರಾಗಿ ಭೇಟಿ ನೀಡಿದ ಅವರು, ಶಿವಲಿಂಗಕ್ಕೆ ಅಭಿಷೇಕ ನೆರವೇರಿಸಿದರು. ನಂತರ ರೋಟರಿ ರಕ್ತ ನಿಧಿಯಿಂದ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡು ರಕ್ತ ದಾನ ಮಾಡಿದವರಿಗೆ ಪ್ರಮಾಣ ಪತ್ರ ವಿತರಿಸಿದರು.