ಶಿವಮೊಗ್ಗ : ರೈತರ ನಿರಂತರ ಹೋರಾಟದಿಂದಾಗಿ ಮೂರು ವಿವಾದಿತ ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ವಾಪಸ್ ತೆಗೆಕೊಂಡಿದೆ. ಆದರೆ ಕರ್ನಾಟಕ ಸರ್ಕಾರ ಇನ್ನೂ ಕಾಯ್ದೆಗಳನ್ನು ವಾಪಾಸ್ ತೆಗೆದುಕೊಂಡಿಲ್ಲ. ಹೀಗಾಗಿ ಕಾಗೋಡಿನಿಂದ ಬೆಂಗಳೂರಿನವರೆಗೆ ಜನಾಂದೋಲನಗಳ ಮಹಾಮೈತ್ರಿ ನೇತೃತ್ವದಲ್ಲಿ ಜನಜಾಗೃತಿ ಜಾಥಾ ಆಯೋಜನೆ ಮಾಡಲಾಗಿದೆ.
ಈ ಕುರಿತು ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಮಾಹಾಮೈತ್ರಿಯ ಶಿವಾನಂದ ಕುಗ್ವೆ, ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ಹಿಂಪಡೆದುಕೊಂಡಿದೆ. ಆದರೆ ಕರ್ನಾಟಕ ಸರ್ಕಾರ ಇನ್ನೂ ಕಾಯ್ದೆಗಳನ್ನು ಹಿಂಪಡೆದುಕೊಂಡಿಲ್ಲ. ಆದ್ದರಿಂದ ಕಾಯ್ದೆ ಹಿಂಪಡೆಯಬೇಕೆಂದು ಆಗ್ರಹಿಸಿ ಮಾರ್ಚ್ 9ರಂದು ಕಾಗೋಡಿನಿಂದ ಜನಾಂದೋಲನ ಜಾಥಾ ಆರಂಭವಾಗಲಿದೆ. ಐದು ದಿನಗಳ ಕಾಲ ನಡೆಯುವ ಈ ಜಾಥಾ ಮಾರ್ಚ್ 13ರಂದು ಬಸವ ಕಲ್ಯಾಣದಿಂದ ಬರುವ ಮತ್ತೊಂದು ಜಾಥಾದೊಂದಿಗೆ ಬೆಂಗಳೂರಿನ ಕಡೆ ಹೋಗಲಾಗುವುದು ಎಂದು ಮಾಹಿತಿ ನೀಡಿದರು.