ತರಬೇತುದಾರನ ಅಮಾನತಿಗೆ ಆಗ್ರಹ

ಶಿವಮೊಗ್ಗ : ಇಲ್ಲಿನ ಕ್ರೀಡಾ ಮತ್ತು ಯುವಜನ ಸಬಲೀಕರಣ ಇಲಾಖೆಯ ಹಾಸ್ಟೆಲ್‌ನಲ್ಲಿರುವ ವಿದ್ಯಾರ್ಥಿನಿಯರಿಗೆ ಅಲ್ಲಿನ ಕ್ರೀಡಾ ತರಬೇತುದಾರ ಬಾಳಪ್ಪ ಮಾನೆ ಮಾನಸಿಕ ಹಾಗೂ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಆರೋಪಿಸಿದೆ.

ಈ ಕುರಿತಾಗಿ ವಿದ್ಯಾರ್ಥಿನಿಯರ ಪೋಷಕರು ತರಬೇತುದಾರನ ವಿರುದ್ಧ ಸಂಬಂಧ ಪಟ್ಟ ಅಧಿಕಾರಿಗಳಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ಜಿಲ್ಲಾಧಿಕಾರಿಗಳು ಈ ಕೂಡಲೇ ತರಬೇತುದಾರನನ್ನ ಅಮಾನತು ಮಾಡಿ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕು ಹಾಗೂ ವಿದ್ಯಾರ್ಥಿಗಳ ಸಮಸ್ಯೆ ಆಲಿಸದ ಕ್ರೀಡಾ ಇಲಾಖೆಯ ಅಧಿಕಾರಿಗಳ ವಿರುದ್ಧವು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್, ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ.