ಡಿಜಿಟಲ್ ಸದಸ್ಯತ್ವ ನೋಂದಣಿ ಅಭಿಯಾನ 

ತೀರ್ಥಹಳ್ಳಿ :  ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ನೊಂದಣಿ ಅಭಿಯಾನ ಕಾರ್ಯಕ್ರಮ ಹಾಗೂ ಮಾಹಿತಿ ಕಾರ್ಯಾಗಾರ ನಡೆಯಿತು. ಬಂಟರ ಭವನದಲ್ಲಿ ನಡೆದ ಈ ಕಾರ್ಯಕ್ರಮದ ನೇತೃತ್ವವನ್ನ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಹಿಸಿಕೊಂಡಿದ್ದರು.

ಜಿಲ್ಲಾ ಸಂಯೋಜಕ ಹಾಗೂ ಸಾಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೌಫಿಕ್  ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಕಾರ್ಯಾಗಾರದಲ್ಲಿ ತೀರ್ಥಹಳ್ಳಿಯ ಎರಡು ಬ್ಲಾಕ್‌ನ ಅಧ್ಯಕ್ಷರು, ವಿವಿಧ ಘಟಕಗಳ ಪದಾಧಿಕಾರಿಗಳು, ಪಕ್ಷದ ಮುಖಂಡರು, ಪಟ್ಟಣ ಪಂಚಾಯತ್, ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಕಾರ್ಯಕರ್ತರು ಹಾಜರಿದ್ದರು.