ಶಿವಮೊಗ್ಗ : ಹರ್ ಘರ್ ತಿರಂಗ್ ಅಭಿಯಾನದ ಅಡಿಯಲ್ಲಿ ಆಗಸ್ಟ್ ೧೩ರಿಂದ ೧೫ರವರೆಗೆ ಜಿಲ್ಲೆಯ ಎಲ್ಲಾ ಮನೆ, ಸರ್ಕಾರಿ ಹಾಗೂ ಸರ್ಕಾರೇತರ ಸಂಘ ಸಂಸ್ಥೆಗಳ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಹಾರಿಸಲು ಸಿದ್ಧತೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ತಿಳಿಸಿದರು.
ಈ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಅಭಿಯಾನವನ್ನು ಯಶಸ್ವಿಯಾಗಿ ನೆರವೇರಿಸಲು ಇಬ್ಬರು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಸಾರ್ವಜನಿಕರು ತ್ರಿವರ್ಣ ಧ್ವಜದ ಶಿಷ್ಟಾಚಾರಕ್ಕೆ ಚ್ಯುತಿ ಬಾರದಂತೆ ಎಚ್ಚರಿಕೆ ವಹಿಸಬೇಕು. ಸಾರ್ವಜನಿಕರು ಆಗಸ್ಟ್ ೧೩ರಂದು ಹಾರಿಸಿದ ಬಾವುಟವನ್ನು ಪ್ರತಿದಿನ ಇಳಿಸುವ ಅಗತ್ಯವಿಲ್ಲ. ಹಾನಿಗೀಡಾದ ಧ್ವಜವನ್ನು ಮಾರಾಟ ಮಾಡಬಾರದು ಎಂದು ಸೂಚನೆ ನೀಡಿದ್ದಾರೆ.