ಏ.೨೪ರಂದು ಜಿಲ್ಲಾ ಭೋವಿ ಸಮಾಜದ ಬೃಹತ್ ಸಮಾವೇಶ 

ಶಿವಮೊಗ್ಗ : ಏಪ್ರಿಲ್ 24 ರಂದು ಜಿಲ್ಲಾ ಭೋವಿ ಸಮಾಜದ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಜೊತೆಗೆ ಭೋವಿ ಭವನದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಲಾಗಿದೆ.

ಈ ಬಗ್ಗೆ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಜಿಲ್ಲಾ ಭೋವಿ ಸಮಾಜದ ಅಧ್ಯಕ್ಷ ಎಸ್.ರವಿಕುಮಾರ್,  ಎನ್.ಇ.ಎಸ್.ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಕಾರ್ಯಕ್ರಮದ ಉದ್ಘಾಟನೆಯನ್ನು ಸಿಎಂ ಬಸವರಾಜ್ ಬೊಮ್ಮಾಯಿ ಮಾಡಲಿದ್ದಾರೆ. ಭವನದ ಉದ್ಘಾಟನೆಯನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೆರವೇರಸಿಕೊಡಲಿದ್ದಾರೆ. ಇನ್ನು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸ್ಮರಣ ಸಂಚಿಕೆ ಬಿಡುಗಡೆಗೊಳಿಸುವರು.

ವಿಶೇಷ ಆಹ್ವಾನಿತರಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರ್‌ಸ್ವಾಮಿ ಆಗಮಿಸಲಿದ್ದಾರೆ. ಹಾಗೂ ಮುಖ್ಯ ಅತಿಥಿಗಳಾಗಿ ಸಚಿವ ಕೆ.ಎಸ್.ಈಶ್ವರಪ್ಪ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಗೃಹ ಸಚಿವ ಆರಗ ಜ್ಞಾನೇಂದ್ರ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಆಗಮಿಸಲಿದ್ದಾರೆ. ಹಾಗೂ ಸಮಾಜದ ಅಭಿವೃದ್ಧಿಗೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.